ಮಂಗಳೂರು: ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ವಿಜಯೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ದುರ್ಷರ್ಮಿಗಳು ಚಾಕುವಿನಿಂದ ಇರಿದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ಸಂಭವಿಸಿದೆ. ಬೋಳಿಯಾರು ನಿವಾಸಿಗಳಾದ ಸುರೇಶ್ ಹಾಗೂ ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು.
ಮೋದಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಬೋಳಿಯಾರ್ ವಿಜಯೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಇರಿದು ಪರಾರಿಯಾಗಿದ್ದಾರೆ.
ಗಾಯಗೊಂಡಿರುವ ಇಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.