ನಂಜನಗೂಡು: ಬಾಕಿ ಉಳಿದಿರುವ ವಿದ್ಯುತ್ ಬಿಲ್ ಕಟ್ಟುವಂತೆ ಅಂಧ ವೃದ್ಧೆಯ ಮೇಲೆ ಚೆಸ್ಕಾಂ ಇಲಾಖೆಯ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ಘಟನೆ ನಡೆದಿದೆ. ವೃದ್ಧೆಗೆ ಬಿಲ್ ಕಟ್ಟುವಂತೆ ವೃದ್ಧೆಯನ್ನು ತಳ್ಳಿ ನೂಕಿದ್ದಾರೆ ಎಂದು ಆರೋಪಿಸಲಾಗಿದೆ.

ಸದ್ಯ ಚಾಮರಾಜನಗರದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು  ವೃದ್ಧೆ ಮನೆಗೆ ಬಂದಿದ್ದಾರೆ. ಗೃಹ ಜ್ಯೋತಿ ಯೋಜನೆಯಲ್ಲಿ ಉಚಿತ ಕರೆಂಟ್ ಇದ್ರು 5 ಸಾವಿರ ಬಿಲ್ ಕಟ್ಟುವಂತೆ ಚೆಸ್ಕಾಂ ಇಲಾಖೆಯ ಅಧಿಕಾರಿಗಳು ಒತ್ತಾಯ ಮಾಡಿದ್ದಾರೆ. ಅಲ್ಲದೆ ಮೀಟರ್ ತೆರವು ಮಾಡಿ ವೃದ್ಧೆ ಬಳಿ ಹಣ ಪಡೆದಿದ್ದಾರೆ ಎಂದು ರೈತರು ಗಂಭೀರವಾಗಿ ಆರೋಪಿಸಿದ್ದಾರೆ.