ಮೈಸೂರು : ಮೈಸೂರಿನ ಹೊರವಲಯದಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಲತಾ (25) ಶವ ಪತ್ತೆಯಾಗಿದೆ. ವೇಲಿನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಲತಾ ಗಿರಿಯಾಬೋವಿ ಪಾಳ್ಯ ನಿವಾಸಿಯಾಗಿದ್ದಾಳೆ. ಸ್ಥಳಕ್ಕೆ ಆಲನಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಬೇರೆಡೆ ಕೊಂದು ನಿರ್ಜನ ಪ್ರದೇಶದಲ್ಲಿ ಮೃತ ದೇಹವನ್ನ ಎಸೆದಿದ್ದಾರೆ. ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷಗೆ ರವಾನೆ ಮಾಡಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

