Bengaluru 22°C
Ad

ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ; ತನಿಖೆಗೆ ಸಿಐಡಿ ಪೊಲೀಸರ ಎಂಟ್ರಿ

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನಿಂದ ಉಡುಪಿಗೆ ತಲುಪಿರುವ ಸಿಐಡಿ ಪೊಲೀಸರ ತಂಡವು, ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಮಾಹಿತಿ ಸಂಗ್ರಹಿಸುವ ಕಾರ್ಯ ಕೈಗೊಂಡಿದೆ.

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನಿಂದ ಉಡುಪಿಗೆ ತಲುಪಿರುವ ಸಿಐಡಿ ಪೊಲೀಸರ ತಂಡವು, ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಮಾಹಿತಿ ಸಂಗ್ರಹಿಸುವ ಕಾರ್ಯ ಕೈಗೊಂಡಿದೆ.

Ad

ಬಳಿಕ ಬ್ರಹ್ಮಾವರ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೃತದೇಹ ಪರಿಶೀಲನೆ ನಡೆಸಿ ವೈದ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿತು. ಮೃತದೇಹವನ್ನು ಮಣಿಪಾಲ ಕೆಎಂಸಿಯಲ್ಲಿ ಇಂದು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳದಿಂದ ಮೃತರ ಮನೆಯವರು ಈಗಾಗಲೇ ಬ್ರಹ್ಮಾವರ ತಲುಪಿದ್ದು, ಅಧಿಕೃತ ದೂರು ನೀಡಿದ್ದಾರೆ.

Ad

ಮಹಿಳೆ ಹಾಗೂ ಮಕ್ಕಳಿಗೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೇರಳದ ಕೊಲ್ಲಂ ಮೂಲದ ಬಿಜು ಮೋಹನ್ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಆತನನ್ನು ವಿಚಾರಣೆಗಾಗಿ ಠಾಣೆಗೆ ಕರೆ ತಂದು ಲಾಕಪ್ ನಲ್ಲಿ ಇರಿಸಲಾಗಿತ್ತು. ಭಾನುವಾರ ನಸುಕಿನ ವೇಳೆ ಲಾಕಪ್ ನಲ್ಲೇ ಆತ ಮೃತಪಟ್ಟಿದ್ದ.

Ad
Ad
Ad
Nk Channel Final 21 09 2023