ಗುಂಟೂರು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಚಿಲಕುಟ್‌ಪೇಟದಲ್ಲಿ ನಡೆದಿದೆ.

ದುರಂತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಮತ್ತೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರೆಲ್ಲರೂ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅಯ್ಯಪ್ಪ ಮಾಲಾಧಾರಿಗಳು ಗುಂಟೂರಿನಿಂದ ಪೆನುಕೊಂಡಕ್ಕೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.