Bengaluru 26°C
Ad

ಶಾಲೆ ಮುಖ್ಯ ಶಿಕ್ಷಕನಿಂದ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರೊಬ್ಬರು 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದು ಆ ವಿದ್ಯಾರ್ಥಿನಿ ಇದೀಗ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರೊಬ್ಬರು 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದು ಆ ವಿದ್ಯಾರ್ಥಿನಿ ಇದೀಗ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ.

ಆರೋಪಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 5 ತಿಂಗಳುಗಳಿಂದ ವಿದ್ಯಾರ್ಥಿನಿ ಪಿರಿಯಡ್ ಆಗದ ಕಾರಣ ಪೋಷಕರು ವೈದ್ಯರ ಬಳಿ ಚೆಕಪ್​ಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಮೂರು ತಿಂಗಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪೋಷಕರು ವಿದ್ಯಾರ್ಥಿಯನ್ನು ಪ್ರಶ್ನಿಸಿದಾಗ ಶಾಲೆ ಮುಖ್ಯ ಶಿಕ್ಷಕ ವೆಂಕಟೇಶ್ ಅತ್ಯಾಚಾರ ಎಸಗಿರುವುದನ್ನು ಹೇಳಿದ್ದಾಳೆ.

ವಿದ್ಯಾರ್ಥಿನಿಯ ಮೇಲೆ ಶಾಲೆಯ ಮುಖ್ಯ ಶಿಕ್ಷಕ ಜಿ.ವೆಂಕಟೇಶ ಕಳೆದ ಆರು ತಿಂಗಳುಗಳಿಂದ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಶಿಕ್ಷಕನ ವಿರುದ್ದ ಪೊಕ್ಸೊ , 376 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಇದೀಗ ಪೊಲೀಸರು ಆರೋಪಿ ಶಿಕ್ಷಕ ವೆಂಕಟೇಶ್​ನನ್ನು ಬಂಧಿಸಿದ್ದಾರೆ.

Ad
Ad
Nk Channel Final 21 09 2023
Ad