Bengaluru 23°C
Ad

ತಲೆಗೆ ಬಲವಾಗಿ ಹೊಡೆದ ಕಾರಣ ಆಕಾಶ ಸ್ಥಳದಲ್ಲೇ ಮೃತಪಟ್ಟಿದ್ದಾನೆ : ಕಮಿಷನ‌ರ್ ಪ್ರತಿಕ್ರಿಯೆ

ತಲೆಗೆ ಬಲವಾಗಿ ಹೊಡೆದ ಕಾರಣ ಆಕಾಶ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಕಮಿಷನ‌ರ್ ರೇಣುಕಾಸುಕುಮಾರ ಪ್ರತಿಕ್ರಿಯೆ ನೀಡಿದ್ದಾರೆ.

ಹುಬ್ಬಳ್ಳಿ: ತಲೆಗೆ ಬಲವಾಗಿ ಹೊಡೆದ ಕಾರಣ ಆಕಾಶ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಕಮಿಷನ‌ರ್ ರೇಣುಕಾಸುಕುಮಾರ ಪ್ರತಿಕ್ರಿಯೆ ನೀಡಿದ್ದಾರೆ.

ಲೋಹಿಯಾ ನಗರದಲ್ಲಿ ಆಕಾಶ ಮಠಪತಿ ಎನ್ನುವ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಲೆ ಹೊರತುಪಡಿಸಿ ದೇಹದ ಯಾವುದೇ ಭಾಗದಲ್ಲಿ ಗಾಯದ ಗುರುತು ಇಲ್ಲ.ಪ್ರಕರಣಕ್ಕೆ ಸಂಬಂಧಿಸಿದಂತೆ ಆಕಾಶ ತಂದೆ ಶೇಕರಯ್ಯ ಮಠಪತಿ ನೀಡಿದ ದೂರಿನ ಮೇಲೆ ಆರೋಪಿಗಳ ಪತ್ತೆಗೆ ಮುಂದಾಗಿದ್ದೇವೆ ಅಂತಾ ಕಮಿಷನ‌ರ್ ಹೇಳಿದ್ದಾರೆ.

ಇನ್ನು ಆಕಾಶ ಮಠಪತಿಯ ಶವವನ್ನು ಹುಬ್ಬಳ್ಳಿಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ರುದ್ರಭೂಮಿಗೆ ಕರೆದುಕೊಂಡು ಹೋಗಲಾಯಿತು.

ಮರಣೋತ್ತರ ಪರೀಕ್ಷೆ ಬಳಿಕ ಕಿಮ್ಸ್ ಶವಗಾರದಿಂದ ಆನಂದನಗರದ ಮುಕ್ತಿಧಾಮಕ್ಕೆ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಪೊಲೀಸ್ ಬಂದೋಬಸ್ತ್ ಮೂಲಕ ತೆಗೆದುಕೊಂಡು ಹೋಗಲಾಯಿತು.

ಇನ್ನೂ ಹುಬ್ಬಳ್ಳಿ ಧಾರವಾಡ ಅವಳಿನಗರದ ಬಹುತೇಕ ಆಟೋಗಳು ಕೂಡ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ನೇಹಾ ಹಿರೇಮಠ ತಂದೆ ನಿರಂಜನ ಹಿರೇಮಠ ಕೂಡ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Ad
Ad
Nk Channel Final 21 09 2023
Ad