ಆಂಧ್ರಪ್ರದೇಶ : ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ನ ನಾಯಕನೊಬ್ಬನನ್ನು ಯುವಕನೊಬ್ಬ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಲ್ನಾಡು ಜಿಲ್ಲೆಯಲ್ಲಿ ನಡೆದಿದೆ.
ಯುವಕನೊಬ್ಬ ಇದ್ದಕಿದ್ದಂತೆ ಮಚ್ಚಿನಿಂದ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಗೊಂಡಿದೆ.ಮೃತ ವ್ಯಕ್ತಿಯನ್ನು ರಶೀದ್ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯೇ ಹರಿದಿದೆ, ಎರಡೂ ಕೈಗಳು ತುಂಡಾಗಿದ್ದು, ಕುತ್ತಿಗೆಗೆ ಆಳವಾದ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಲ್ನಾಡು ಜಿಲ್ಲಾ ಪೊಲೀಸ್ ಮುಖ್ಯಸ್ಥ ಕಂಚಿ ಶ್ರೀನಿವಾಸ ರಾವ್ ಇಂಡಿಯಾ ಟುಡೇ ಜತೆ ಮಾತನಾಡಿದ್ದು, ವೈಯಕ್ತಿಕ ದ್ವೇಷವೇ ಈ ಭೀಕರ ಹತ್ಯೆಯ ಹಿಂದಿನ ಉದ್ದೇಶ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದರು.

