ಉಡುಪಿ: ಗಾಂಜಾ ನಶೆಯಲ್ಲಿದ್ದ ಗುಂಪಿನಿಂದ ದಂಪತಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ಪಕ್ಕದಲ್ಲಿ ನಡೆದಿದೆ.
ಬೈಕ್ ಪಾರ್ಕಿಂಗ್ ವಿಚಾರದಲ್ಲಿ ಎದ್ದ ವಾಗ್ವಾದ , ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಶೇಖರ್ ತಿಂಗಳಾಯ ಮತ್ತು ಗೀತಾ ಹಲ್ಲೆಗೊಳಗಾದ ದಂಪತಿಗಳು. ಸಾಗರ್, ಚರಣ್, ಯಶವಂತ್, ಕಿಶೋರ್,ರಾಜ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ.
ಸಿಸಿ ಕ್ಯಾಮರದಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ. ಸದ್ಯ ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ದಂಪತಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.