ಬಂಟ್ವಾಳ : ತಾಲೂಕಿನ ತುಂಬೆ ಎಂಬಲ್ಲಿ ಕಳೆದ ಆ.14 ರಂದು ನಡೆದ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48) ಹಾಗೂ ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಎಂದು ಗುರುತಿಸಲಾಗಿದೆ.
ತುಂಬೆ ಬಳಿ ನಡೆದ ಜಾನುವಾರು ಕಳವು ಹಾಗೂ ಅದರ ಅಂಗಾಗಗಳು ಮರುದಿನ ಸದ್ರಿ ಸ್ಥಳದ ಸಮೀಪದಲ್ಲಿ ಪತ್ತೆಯಾದ ಘಟನೆಯಲ್ಲಿ ಭಾಗಿಯಾಗಿದ್ದು, ಇವರ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಈ ಆರೋಪಿಗಳು ಸೆ.4 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗೋಹತ್ಯೆ ಪ್ರಕರಣದಲ್ಲೂ ಭಾಗಿಯಾಗಿರುವ ಬಗ್ಗೆ ವಿಚಾರಣೆ ವೇಳೆ ತಿಳಿದುಬಂದಿದ್ದು, ತನಿಖೆ ಮುಂದುವರಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

