Bengaluru 22°C
Ad

ಇಂದು ದರ್ಶನ್ ಸೇರಿ ನಾಲ್ವರು ಆರೋಪಿಗಳ ಕಸ್ಟಡಿ ಅಂತ್ಯ : ಕೋರ್ಟ್ ಗೆ​ ಹಾಜರು

ಕೊಲೆ ಕೇಸ್​​ನಲ್ಲಿ ನಟ ದರ್ಶನ್​​ ಅಂಡ್ ಗ್ಯಾಂಗ್​​ ವಿಚಾರಣೆ ಬಹುತೇಕ ಮುಗಿದಿದೆ. 3 ಬಾರಿ ಕಸ್ಟಡಿಗೆ ಪಡೆದು ಮಹತ್ವದ ಸಾಕ್ಷ್ಯಗಳನ್ನು ಕಲೆ ಹಾಕಲಾಗಿದೆ. ಇವತ್ತು ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಕಸ್ಟಡಿ ಅಂತ್ಯ ಆಗಲಿದ್ದು, ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಬೆಂಗಳೂರು: ಕೊಲೆ ಕೇಸ್​​ನಲ್ಲಿ ನಟ ದರ್ಶನ್​​ ಅಂಡ್ ಗ್ಯಾಂಗ್​​ ವಿಚಾರಣೆ ಬಹುತೇಕ ಮುಗಿದಿದೆ. 3 ಬಾರಿ ಕಸ್ಟಡಿಗೆ ಪಡೆದು ಮಹತ್ವದ ಸಾಕ್ಷ್ಯಗಳನ್ನು ಕಲೆ ಹಾಕಲಾಗಿದೆ. ಇವತ್ತು ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಕಸ್ಟಡಿ ಅಂತ್ಯ ಆಗಲಿದ್ದು, ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

Ad
300x250 2

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು ಕೋರ್ಟ್​ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದೆ.  ನಟ ದರ್ಶನ್​ ಸೇರಿ ನಾಲ್ವರು ಆರೋಪಿಗಳನ್ನು ಕೆಲವೊಂದು ವಿಚಾರಣೆ ಬಾಕಿ ಇದ್ದ ಕಾರಣ​​​​​ ಮತ್ತೆರಡು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿತ್ತು.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಪ್ರಕರಣದಲ್ಲಿ ಭಾಗಿಯಾಗಿದ್ದ ಮುಕ್ಕಾಲುಭಾಗ ಆರೋಪಿಗಳು ಈಗಾಗಲೇ ಜೈಲುಪಾಲಾಗಿದ್ದಾರೆ. ದರ್ಶನ್ ಸೇರಿ ಉಳಿದ ನಾಲ್ವರು ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದ ಅನ್ನಪೂಣೇಶ್ವರಿ ನಗರ ಠಾಣೆ ಪೊಲೀಸರು ವಿಚಾರಣೆ ಮುಗಿಸಿದ್ದಾರೆ. ನಟ ದರ್ಶನ್​​​​​​ಗೆ 13 ದಿನಗಳ ಕಸ್ಟಡಿ ಅಂತ್ಯ ಆಗಿದ್ದು ಇವತ್ತು ಪೊಲೀಸರು 24ನೇ ಎಸಿಎಂಎಂ ಕೋರ್ಟ್​​ಗೆ ಹಾಜರುಪಡಿಸಲಿದ್ದಾರೆ.

 

 

Ad
Ad
Nk Channel Final 21 09 2023
Ad