Bengaluru 27°C
Ad

ಸುಳ್ಯ: ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಶಾಲೆ ಆವರಣದಲ್ಲಿ ಪತ್ತೆ

Sullia

ಸುಳ್ಯ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಸುಳ್ಯ ಸಮೀಪದ ಶಾಲೆಯ ಜಗಲಿಯಲ್ಲಿ ಪತ್ತೆಯಾಗಿದೆ.

ಸುಳ್ಯದ ಕಾಂತಮಂಗಲ ಸರಕಾರಿ ಶಾಲೆಯ ಬಳಿ ಮೃತದೇಹ ಪತ್ತೆಯಾಗಿದೆ. ಸುಮಾರು 25-30 ವರ್ಷದ ಅಪರಿಚಿತ ಯುವಕನ ಶವ ಎಂದು ಅಂದಾಜಿಸಲಾಗಿದೆ. ಗುರುತು ಪತ್ತೆಯಾಗಿಲ್ಲ. ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವುದು ಕಂಡುಬಂದಿದೆ.

ಇನ್ನು ಘಟನಾ ಸ್ಥಳಕ್ಕೆ ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ, ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು  ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Ad
Ad
Nk Channel Final 21 09 2023
Ad