Bengaluru 24°C
Ad

ಬಾತ್​​ ರೂಮ್​ನ​ಲ್ಲಿ ಯುವತಿ ಶವ ಪತ್ತೆ ಕೇಸ್​ : ಕೊಲೆಗೈದ ಬಾಲಕ ವಶಕ್ಕೆ

ಸುಬ್ರಹ್ಮಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಪ್ರಬುದ್ಧ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಸಹೋದರನ ಸ್ನೇಹಿತ 14 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು:   ಸುಬ್ರಹ್ಮಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಪ್ರಬುದ್ಧ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಸಹೋದರನ ಸ್ನೇಹಿತ 14 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ.ಮೇ 15 ರಂದು ಸಂಜೆ ಮನೆಯಲ್ಲಿ ಬೃಂದಾವನ ಲೇಟೌಟ್​ ನಿವಾಸಿ ಪ್ರಬುದ್ಧ (20) ನಿಗೂಢವಾಗಿ ಹತ್ಯೆಯಾಗಿದ್ದಳು. ಆರಂಭದಲ್ಲಿ ಪೊಲೀಸರು ಆತ್ಮಹತ್ಯೆ ಎಂದು ಶಂಕಿಸಿದ್ದರು. ಬಳಿಕ ಮನೆಯವರ ದೂರಿನ ಆಧಾರದ ಮೇಲೆ ತನಿಖೆ ನಡೆಸಲಾಗಿತ್ತು.ಕೊನೆಗೆ ಕೊಲೆ ಹಿಂದಿನ ರಹಸ್ಯ ಬಯಲಾಗಿದೆ. ಪ್ರಬುದ್ಧ ಕೊಲೆಯಾಗಿದ್ದ ವಿದ್ಯಾರ್ಥಿನಿ.

ತನ್ನ ತಾಯಿ ಹಾಗೋ ಸಹೋದರನ ಜೊತೆ ವಿದ್ಯಾರ್ಥಿನಿ ಪ್ರಬುದ್ಧ ನೆಲೆಸಿದ್ದಳು. ತಮ್ಮನ ಸ್ನೆಹೀತರು ಎಂದಿನಂತೆ ಮನೆಗೆ ಬಂದಿದ್ದು ಮುರಿದಿತ್ತು. ಆಗ ಆರೋಪಿತ ಬಾಲಕನಿಗೆ ಕನ್ನಡಕ ರಿಪೇರಿ ಮಾಡಿಸಿ ಕೊಡುವಂತೆ ಮತ್ತೊಬ್ಬ ಸ್ನೇಹಿತ ಹಠ ಹಿಡಿದಿದ್ದ. ಗೆಳೆಯನ ಜತೆ ಮನೆ ಬಂದಿದ್ದಾಗ ಆತನ ಸೋದರಿ ಪ್ರಬುದ್ಧಳ ಪರ್ಸ್‌ನಲ್ಲಿದ್ದ 2 ಸಾವಿರವನ್ನು ಕಳವು ಮಾಡಿದ್ದಾನೆ.

ವಿಷಯ ತಿಳಿದ ಪ್ರಬುದ್ಧ ಹಿಂತಿರುಗಿಸುವಂತೆ ತಾಕೀತು ಮಾಡಿದ್ದಳು ಮಾರನೇ ದಿನ ಹಿಂದಿನ ಬಾಗಿಲಿನಿಂದ ಬಂದ ಬಾಲಕ ಆತನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಆದರೂ ಒಪ್ಪಿಕೊಳ್ಳದ ಪ್ರಬುದ್ಧ ನಡುವೆ ತಳ್ಳಾಟ ನಡೆದಿದೆ ಈ ನಡುವೆ ಆಕೆ ಬಿದ್ದು ಪ್ರಜ್ಞಾಹೀನಾಳಾಗಿದ್ದಾಳೆ. ಈ ಅವಕಾಶವನ್ನು ಬಳಸಿಕೊಂಡ ಆತ, ಪ್ರಬುದ್ಧಳ ಕುತ್ತಿಗೆ ಹಾಗೂ ಕೈಯನ್ನು ಚಾಕುವಿನಿಂದ ಕುಯ್ದು ಮನೆಯಿಂದ ಓಡಿ ಹೋಗಿದ್ದಾನೆ.

ವೈಯಕ್ತಿಕ ಕಾರಣ ಹಿನ್ನೆಲೆಯಲ್ಲಿ ಈ ಹಿಂದೆ ಮೂರು ಬಾರಿ ಚಾಕುವಿನಿಂದ ಕೈ ಕುಯ್ದುಕೊಂಡು ಪ್ರಬುದ್ಧ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಸಂಗತಿಯನ್ನು ತನ್ನ ಗೆಳೆಯನಮುಂದೆ ಆಕೆಯ ಸೋದರ ಹೇಳಿಕೊಂಡಿದ್ದ. ಹೀಗಾಗಿಯೇ ಪ್ರಬುದ್ಧಳಿಗೆ ಕೈ ಮತ್ತು ಕುತ್ತಿಗೆ ಚಾಕುವಿನಿಂದ ಇರಿದು ಆತ್ಮಹತ್ಯೆ ಎಂದು ಬಿಂಬಿಸಲು ಆತ ಯತ್ನಿಸಿದ್ದ. ಅಂತೆಯೇ ಸಂಚು ರೂಪಿಸಿ ಆತ ಕಾರ್ಯಗತಗೊಳಿಸಿದ್ದ ಎಂದು ಮೂಲಗಳು ಹೇಳಿವೆ.

Ad
Ad
Nk Channel Final 21 09 2023
Ad