ಲೂಧಿಯಾನ: ಶಿವಸೇನಾ ಮುಖಂಡರೊಬ್ಬರ ಮೇಲೆ ನಾಲ್ವರು ಕತ್ತಿಗಳಿಂದ ಹಲ್ಲೆ ನಡೆಸಿ, ಗಂಭೀರವಾಗಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿರುವ ಶಿವಸೇನಾ ಮುಖಂಡರನ್ನು ಸಂದೀಪ್ ಥಾಪರ್ ಎಂದು ಗುರುತಿಸಲಾಗಿದೆ. ಸಂದೀಪ್ ಥಾಪರ್ ಅವರು ಟ್ರಸ್ಟ್‌ನ ಸಂಸ್ಥಾಪಕ-ಅಧ್ಯಕ್ಷ ರವೀಂದರ್ ಅರೋರಾ ಅವರ ನಾಲ್ಕನೇ ಪುಣ್ಯಸ್ಮರಣೆಯ ಸಮಾರಂಭದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದರು. ಈ ವೇಳೆ ನಡುರಸ್ತೆಯಲ್ಲಿಯೇ ನಾಲ್ವರು ನಿಹಾಂಗ್ ಗಳು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ.
ಮಾರಾಣಾಂತಿಕ ಹಲ್ಲೆಯಿಂದಾಗಿ ಥಾಪರ್ ಅವರ ತಲೆಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ದಾಳಿ ನಡೆದಾಗ ಥಾಪರ್ ಅವರ ಭದ್ರತಾ ಸಿಬ್ಬಂದಿ ಸ್ಥಳದಲ್ಲಿಯೇ ಇದ್ದರು. ದಾಳಿಯ ಬಳಿಕ ನಿಹಾಂಗ್‌ಗಳು ಸ್ಥಳದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಇನ್ಸ್‌ಪೆಕ್ಟರ್ ಗುರ್ಜಿತ್ ಸಿಂಗ್ ತಿಳಿಸಿದ್ದಾರೆ.

