Bengaluru 24°C

ಐದನೇ ಮಹಡಿಯಿಂದ ಜಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ನಗರದ ಖಾಸಗಿ ಎಂಜಿನಿಯರಿಂಗ್‌ ಕಾಲೇಜು ಕಟ್ಟಡದ 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನುಮಂತನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ನಗರದ ಖಾಸಗಿ ಎಂಜಿನಿಯರಿಂಗ್‌ ಕಾಲೇಜು ಕಟ್ಟಡದ 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನುಮಂತನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಆನೇಕಲ್‌ ನಿವಾಸಿ ಆರ್‌.ಆಕರ್ಷ್‌(22) ಮೃತ ವಿದ್ಯಾರ್ಥಿ. ಬಸವನಗುಡಿಯ ಕಾಲೇಜಿನಲ್ಲಿ ಏರೋಸ್ಪೇಸ್‌ ಇಂಜಿನಿಯರಿಂಗ್‌ ಕೋರ್ಸ್‌ನ 7ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕರ್ಷ, ಮಧ್ಯಾಹ್ನ ಇಂಟರ್‌ನಲ್‌ ಪರೀಕ್ಷೆಗೆ ಹಾಜರಾಗಿದ್ದ.


ಆದರೆ, ಸಂಜೆ ಸುಮಾರು 5 ಗಂಟೆಗೆ ಕಾಲೇಜು ಕಟ್ಟಡದ 5ನೇ ಮಹಡಿಯಿಂದ ಜಿಗಿದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಆಕರ್ಷ್‌ನನ್ನು ಸ್ನೇಹಿತರು ಹಾಗೂ ಕಾಲೇಜು ಸಿಬ್ಬಂದಿ ಸಮೀಪದ ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಆಕರ್ಷ್‌ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.


ಹನುಮಂತನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಕರ್ಷ್‌ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಹನುಮಂತನಗರ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Nk Channel Final 21 09 2023