Bengaluru 22°C
Ad

ಭೀಮಾತೀರದಲ್ಲಿ ಗುಂಡಿನ ದಾಳಿ: ಬಿಜೆಪಿ ಪುರಸಭೆ ಸದಸ್ಯೆಯ ಪತಿಯ ಹತ್ಯೆ

Roudy

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಗುಂಡಿನ ದಾಳಿ ನಡೆದಿದೆ. ಅಶೋಕ ಮಲ್ಲಪ್ಪ ಗಂಟಗಲ್ಲ ಎಂಬಾತನ ಮೇಲೆ ಗುಂಡಿನ ದಾಳಿ ನಡೆದಿದೆ. ಮನೆಯ ಬಳಿ ಇದ್ದಾಗ ಗುಂಡಿನ ದಾಳಿ ನಡೆಸಿದ ಅಪರಿಚಿತ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ಅಶೋಕ್ ಇತ್ತೀಚೆಗಷ್ಟೇ ಪೆರೋಲ್ ಮೇಲೆ ಆಚೆ ಬಂದಿದ್ದ. ಮನೆಯಿಂದ ಚಡಚಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಶೋಕ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡುಗಳು ತಾಗಿವೆ. ಇನ್ನೂ ಗುಂಡಿನ ದಾಳಿಯಿಂದ ಸ್ಥಳದಲ್ಲೇ ಅಶೋಕ ಮೃತಪಟ್ಟಿದ್ದಾನೆ.

ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆಯಾಗಿದ್ದಾರೆ.

Ad
Ad
Nk Channel Final 21 09 2023
Ad