Bengaluru 23°C
Ad

ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ಪ್ರಕರಣ: 7 ಆರೋಪಿಗಳು ವಶಕ್ಕೆ

ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 7 ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬೆಂಗಳೂರು: ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 7 ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ವಿಶಾಲ್, ಆಕಾಶ್, ಸಂತೋಷ್, ಸುರೆಂದರ್ ಸೇರಿ 7 ಜನರನ್ನು ಬಂಧಿಸಲಾಗಿದೆ. ಆರೋಪಿಗಳು ಡೀಗರ್ ಅಲಿಯಾಸ್ ಧನಂಜಯ್ ಎಂಬ ಯುವಕನ ಮೇಲೆ ದೊಣ್ಣೆ, ಕಲ್ಲು, ಬೆಲ್ಟ್, ಕ್ರೇಟ್​ನಿಂದ ಹಲ್ಲೆ ಮಾಡಿದ್ದರು.

ಅರೆಬೆತ್ತಲು ಮಾಡಿ ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಹೋಟೆಲ್ ಮ್ಯಾನೇಜರ್ ದೂರಿನ ಮೇರೆಗೆ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳು ಮತ್ತು ಹಲ್ಲೆಗೊಳಗಾದ ಧನಂಜಯ್ ಎಲ್ಲರೂ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದರು.

ಹಲ್ಲೆಗೊಳಗಾದ ಯುವಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Ad
Ad
Nk Channel Final 21 09 2023
Ad