ಉಡುಪಿ: ಕಾರು ಮಾರಾಟ ವಿಚಾರವಾಗಿ ಎರಡು ತಂಡಗಳ ತಲವಾರು ಹಿಡಿದುಕೊಂಡು ಹೊಡೆದಾಡಿಕೊಂಡ ಘಟನೆ ನಗರದ ಕುಂಜಿಬೆಟ್ಟು ರಸ್ತೆಯಲ್ಲಿ ನಡೆದಿದೆ. ಈ ಭಯಾನಕ ಗ್ಯಾಂಗ್ ವಾರ್ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು ಸದ್ಯ ವೈರಲ್ ಆಗಿದೆ.

ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮೇ 18ರಂದು ಈ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.