Bengaluru 22°C
Ad

ಉಡುಪಿಯಲ್ಲಿ ಗ್ಯಾಂಗ್ ವಾರ್: ಓರ್ವ ಗಂಭೀರ,ಇಬ್ಬರು ಆರೋಪಿಗಳ ಬಂಧನ

ಕಾರು ಮಾರಾಟ ವಿಚಾರವಾಗಿ ಎರಡು ತಂಡಗಳ ತಲವಾರು ಹಿಡಿದುಕೊಂಡು ಹೊಡೆದಾಡಿಕೊಂಡ ಘಟನೆ ನಗರದ ಕುಂಜಿಬೆಟ್ಟು ರಸ್ತೆಯಲ್ಲಿ ನಡೆದಿದೆ. ಈ ಭಯಾನಕ ಗ್ಯಾಂಗ್ ವಾರ್ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು ಸದ್ಯ ವೈರಲ್ ಆಗಿದೆ.

ಉಡುಪಿ: ಕಾರು ಮಾರಾಟ ವಿಚಾರವಾಗಿ ಎರಡು ತಂಡಗಳ ತಲವಾರು ಹಿಡಿದುಕೊಂಡು ಹೊಡೆದಾಡಿಕೊಂಡ ಘಟನೆ ನಗರದ ಕುಂಜಿಬೆಟ್ಟು ರಸ್ತೆಯಲ್ಲಿ ನಡೆದಿದೆ. ಈ ಭಯಾನಕ ಗ್ಯಾಂಗ್ ವಾರ್ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು ಸದ್ಯ ವೈರಲ್ ಆಗಿದೆ.

ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮೇ 18ರಂದು ಈ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Ad
Ad
Nk Channel Final 21 09 2023
Ad