ಮಂಗಳೂರು : ಮಂಗಳೂರಿನಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹತ್ಯೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರ ಬಂಧನ ಮಾಡಲಾಗಿದೆ. ಮೃತ ಕಾರ್ತಿಕ್ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಬಂಧಿತ ಆರೋಪಿಗಳು.
ಇಬ್ಬರನ್ನೂ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸೋ ಮೊದಲೇ ಇಬ್ಬರು ಆರೋಪಿಗಳು ತಲೆತಿರುಗಿ ಬಿದ್ದಿದ್ದಾರೆ. ಅನಾರೋಗ್ಯ ಹಿನ್ನಲೆಯಲ್ಲಿ ಇಬ್ಬರನ್ನೂ ಮೂಡಬಿದ್ರೆಯ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

ಸದ್ಯ ಇಬ್ಬರು ಆರೋಪಿಗಳು ಆಸ್ಪತ್ರೆಯಲ್ಲೇ ಇದ್ದಾರೆ. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್ ನೋಟ್ ಬರೆದಿದ್ದರು. ತಂದೆ, ತಾಯಿ, ಸಹೋದರಿ ವಿರುದ್ದ ಕಾರ್ತಿಕ್ ಭಟ್ ಆರೋಪ ಮಾಡಿದ್ದರು. ಈ ಹಿನ್ನಲೆಯಲ್ಲೇ ಇಬ್ಬರನ್ನು ಮುಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

