ಬೆಂಗಳೂರು:ಪತ್ನಿಯಿಂದಲೇ ಪತಿಯ ಕೊಲೆಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹೇಶ (39) ಮೃತ ದುರ್ದೈವಿ. ಪತ್ನಿ ತೇಜಸ್ವಿನಿಯಿಂದ ಈ ಕೃತ್ಯ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜಗಳ ಗಂಡ-ಹೆಂಡತಿ ಜಗಳವಾಡುತ್ತಿದ್ದರು. ಜಗಳದ ವೇಳೆ ತೇಜಸ್ವಿನಿ ಸಿಟ್ಟಿನಲ್ಲಿ ಮಹೇಶ್‌ನನ್ನು ತಳ್ಳಿದ್ದಾಳೆ.
ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಮಹೇಶ್ ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವವಾಗಿ ಮಹೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ. ಕೊಲೆ ಸಂಬಂಧ ಪೊಲೀಸರು ತನಿಖೆಯನ್ನು ನಡೆಸಲಾಗುತ್ತಿದೆ.

