ಮುಂಬೈ: ಐಎಎಸ್ ಅಧಿಕಾರಿಯ ಪುತ್ರಿಯೊಬ್ಬಳು ಇಂದು ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ ಅವರ ಪುತ್ರಿ ಲಿಪಿ ರಸ್ತೋಗಿ (27) ಆತ್ಮಹತ್ಯೆಗೆ ಶರಣಾದ ಯುವತಿ. ಕಾನೂನು ವಿದ್ಯಾರ್ಥಿನಿಯಾಗಿದ್ದ ಲಿಪಿ, ಇಂದು ಮುಂಜಾನೆ 4 ಗಂಟೆ ಸುಮಾರಿಗೆ ರಾಜ್ಯ ಸಚಿವಾಲಯದ ಬಳಿಯ ಕಟ್ಟಡದ 10ನೇ ಮಹಡಿಯಿಂದ ಜಿಗಿದಿದ್ದಾರೆ.
ಆಕೆಯ ಕೋಣೆಯಲ್ಲಿ ಡೆತ್ ನೋಟ್ ಒಂದು ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಿಪಿ ಹರಿಯಾಣದ ಸೋನೆಪತ್‌ನಲ್ಲಿ ಕಾನೂನು ವ್ಯಾಸಾಂಗ ಮಾಡುತ್ತಿದ್ದಳು. ಪೊಲೀಸ್ ಅಧಿಕಾರಿಗಳ ಪ್ರಕಾರ, ಅವಳು ಪರೀಕ್ಷೆಗಳ ಬಗ್ಗೆ ಆತಂಕದಲ್ಲಿದ್ದಳು ಎಂದು ಹೇಳಲಾಗುತ್ತಿದೆ.

