ವಿಜಯನಗರ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಾನಸಿಕ ಅಸ್ವಸ್ಥೆಯನ್ನು ಬೆತ್ತಲೆಗೊಳಿಸಿ ಹತ್ಯೆ.ಮಾಡಿರುವಂತಹ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಬಳಿಯ ತಿಪ್ಪೇಹಳ್ಳಿಯಲ್ಲಿ ನಡೆದಿದೆ. ಚಳ್ಳಕೆರೆ ತಾಲ್ಲೂಕಿನ ಅಬ್ಬೇನಹಳ್ಳಿಯ ನೇತ್ರಾ (30) ಮೃತ ಮಾನಸಿಕ ಅಸ್ವಸ್ಥೆ. ತಿಪ್ಪೇಹಳ್ಳಿ- ಅಬ್ಬೇನಹಳ್ಳಿಯ ಮಧ್ಯದ ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ.
ಶ್ವಾನದಳ, ಬೆರಳಚ್ಚು ಸಿಬ್ಬಂದಿ ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ. ವಿಜಯನಗರ ಎಸ್ಪಿ ಶ್ರೀ ಹರಿಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೊಟ್ಟೂರು ಸಿಪಿಐ ವೆಂಕಟಸ್ವಾಮಿ, ಕಾನಹೊಸಹಳ್ಳಿ ಪಿಎಸ್ಐ ಸಿದ್ದರಾಮಪ್ಪ ಬಿದರಾಣಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾನಾಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

