ತುಮಕೂರು: ದೇವರ ಉತ್ಸವ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೃದ್ಧೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ನಡೆದಿದೆ.
ಮದ್ದಮ್ಮ (68) ಮೃತ ವೃದ್ದೆ. ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ದೇವರ ಉತ್ಸವ ಮುಗಿಸಿಕೊಂಡು, ರಾತ್ರಿ ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಹಂತಕರು ವೃದ್ದೆಯನ್ನ ಕೊಲೆ ಮಾಡಿದ ನಂತರ ಆಕೆಯ ಮೈ ಮೇಲೆ ಇದ್ದ ಚಿನ್ನದ ಸರವನ್ನು ಕದ್ದು, ಶವವನ್ನು ನಿರ್ಮಾಣ ಹಂತದ ಕಟ್ಟಡದ ಬಳಿ ಎಸೆದು ಎಸ್ಕೇಪ್ ಆಗಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಶಿರಾ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.
Ad