Bengaluru 22°C
Ad

ರೇಣುಕಾ ಸ್ವಾಮಿಯ ಕೊಲ್ಲುವ ಮುಂಚೆ ಕೊಟ್ಟಿದ್ದರು ಎಲೆಕ್ಟ್ರಿಕ್ ಶಾಕ್

Bng

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶಗಳು ಹೊರಬೀಳುತ್ತಿವೆ. ಆರಂಭದಲ್ಲಿ, ಭಯಪಡಿಸಲು ಹೋಗಿ ಮಾಡಲಾಗಿರುವ ಹತ್ಯೆ ಎನ್ನಲಾಗಿತ್ತು, ಆದರೆ ಪ್ರಕರಣ ಮುಂದುವರೆದಂತೆ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಗ್ಯಾಂಗ್ ಹೇಗೆಲ್ಲ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬ ಅಂಶಗಳು ಬಹಿರಂಗವಾಗುತ್ತಿವೆ.

ನಿನ್ನೆ (ಜೂನ್ 15) ದರ್ಶನ್ ಮತ್ತು ಗ್ಯಾಂಗ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗ ನಡೆದ ವಾದ ವಿವಾದದಲ್ಲಿ ದರ್ಶನ್ ಮತ್ತು ಗ್ಯಾಂಗ್​ ರೇಣುಕಾ ಸ್ವಾಮಿಗೆ ನೀಡಿದ್ದ ರಾಕ್ಷಸ ರೀತಿಯ ಚಿತ್ರಹಿಂಸೆಯ ವಿವರ ಹೊರಬಿದ್ದಿದೆ.

ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರಾಗಿ ನೇಮಕವಾಗಿರುವ ಪ್ರಸನ್ನ ಕುಮಾರ್ ಅವರು ಪೊಲೀಸರ ಪರ ವಾದ ಮಂಡಿಸಿ, ನ್ಯಾಯಾಲಯದ ಗಮನಕ್ಕೆ ತಂದ ಅಂಶವೆಂದರೆ ರೇಣುಕಾ ಸ್ವಾಮಿಯನ್ನು ಕೊಲ್ಲುವ ಮುಂಚೆ ಆತನಿಗೆ ಕರೆಂಟ್ ಶಾಕ್ ನೀಡಲಾಗಿತ್ತು ಎಂಬುದು.

ನ್ಯಾಯಾಲಯದಲ್ಲಿ ದರ್ಶನ್ ಹಾಗೂ ಗ್ಯಾಂಗ್​ನ ಕ್ರೂರತೆಯ ಬಗ್ಗೆ ಸಣ್ಣ ಸುಳಿವೊಂದನ್ನು ನೀಡಿದ ಹಿರಿಯ ವಕೀಲ ಪ್ರಸನ್ನ ಕುಮಾರ್ ಅವರು ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಯಸಿದ್ದ ಮೆಗ್ಗರ್ ಯಂತ್ರವನ್ನು ಸಹ ವಶಪಡಿಸಿಕೊಳ್ಳಬೇಕಿದೆ ಎಂದು ಮಾಹಿತಿ ನೀಡಿದ್ದರು. ಅಲ್ಲದೆ, ಮೈಸೂರಿನಲ್ಲಿ ಕೆಲವು ಕಡೆ ಆರೋಪಿಯೊಟ್ಟಿಗೆ ಮಹಜರು ಮಾಡಬೇಕಿದೆ. ಆರೋಪಿಯ ಬಟ್ಟೆ ಹಾಗೂ ಚಪ್ಪಲಿಗಳನ್ನು ಸಹ ವಶಪಡಿಸಿಕೊಳ್ಳಬೇಕಿದೆ’ ಎಂದು ಸಹ ವಾದಿಸಿದ್ದಾರೆ.

Ad
Ad
Nk Channel Final 21 09 2023
Ad