ಚಾಮರಾಜನಗರ : ಪಟ್ಟಣ ಠಾಣೆ ಸಮೀಪ ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯನ್ನು ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರದ ಸೋಮವಾರಪೇಟೆ ನಿವಾಸಿ ಗಿರೀಶ್ ಬಂಧಿತ ಆರೋಪಿ. ಈತ ಕಳೆದ ಮಂಗಳವಾರದಂದು ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿ ವಿದ್ಯಾಳನ್ನು ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದನು.

ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಿರೀಶನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು.