ಮಧ್ಯಪ್ರದೇಶ: ರಸ್ತೆಬದಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಮಾಹಿತಿ ಪ್ರಕಾರ ಆರೋಪಿ ಮೊದಲು ಮಹಿಳೆಗೆ ಮದ್ಯ ಕುಡಿಸಿ ನಂತರ ಆಕೆಯ ಮೇಲೆ ರಸ್ತೆಯಲ್ಲೇ ಅತ್ಯಾಚಾರವೆಸಗಿ ಅಲ್ಲೇ ಬಿಟ್ಟು ಓಡಿ ಹೋಗಿದ್ದಾನೆ.

ಈ ವಿಷಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉಜ್ಜಯಿನಿಯ ಕೊಯ್ಲಾ ಫಾಟಕ್ ಬಳಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆಯ ವಿಡಿಯೋ ವೈರಲ್ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಡಿಯೋ ವೈರಲ್ ಆದ ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಸಂತ್ರಸ್ತ ಮಹಿಳೆಯ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಯುವಕ ತನ್ನನ್ನು ಮದುವೆಯಾಗುವುದಾಗಿ ಆಮಿಷ ಒಡ್ಡಿ ನಂತರ ಮದ್ಯ ಕುಡಿಸಿ ನಂತರ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿ ಲೋಕೇಶ್ ಎಂದು ಹೇಳಲಾಗಿದ್ದು, ಕೃತ್ಯ ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ.ನಂತರ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ