ಮಧ್ಯಪ್ರದೇಶ: ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ನಡೆದಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಬೊಡಲ್ ಕಚ್ಚರ್‌ ಎನ್ನುವ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕೂಡು ಕುಟುಂಬವೊಂದರಲ್ಲಿ ಈ ಘಟನೆ ನಡೆದಿದೆ. ಆತನ ಕೃತ್ಯಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ಮಹುಲ್‌ಜಿರಿ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಮಹುಲ್ಜಿರ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಇಡೀ ಗ್ರಾಮವನ್ನು ಸೀಲ್ ಮಾಡಿದ್ದಾರೆ. ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.