ಗುಜರಾತ್: ವ್ಯಕ್ತಿಯೊಬ್ಬ ತನ್ನ ಸ್ನೇಹಿತನ 3 ವರ್ಷದ ಮಗು ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್ನ ವಲ್ಸಾದ್ನಲ್ಲಿ ನಡೆದಿದೆ. ಮೂರು ವರ್ಷದ ಮಗು ಮೇಲೆ ಆಕೆಯ ತಂದೆಯ ಆಪ್ತ ಸ್ನೇಹಿತನೇ ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ.
ಲೈಂಗಿಕ ದೌರ್ಜನ್ಯದ ಸುದ್ದಿ ಹರಡುತ್ತಿದ್ದಂತೆ, ಸ್ಥಳೀಯ ನಿವಾಸಿಗಳು ಉಮರ್ಗಾಮ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು, ತಕ್ಷಣ ಕ್ರಮ ಮತ್ತು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು. ಆರೋಪಿ ಸಿಕ್ಕಿಬಿದ್ದಿದ್ದು, ಮಧ್ಯಾಹ್ನದೊಳಗೆ ಊರಿಗೆ ಕರೆತರಲಾಗುವುದು ಎಂದು ಪೊಲೀಸರು ಪ್ರತಿಭಟನಾಕಾರರ ಬಳಿ ತಿಳಿಸಿದ್ದಾರೆ.
ಆದರೂ ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ ಪ್ರತಿಭಟನಾಕಾರರು ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿದರು.

