Ad

ಕಾಮುಕನ ಅಟ್ಟಹಾಸ; ವಾಕ್​ ಮಾಡಲು ಹೊರಟಿದ್ದ ಮಹಿಳೆಯನ್ನು ತಬ್ಬಿ ಚುಂಬಿಸಿ ವಿಕೃತಿ

Asyult

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓರ್ವ ಮಹಿಳೆ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದರು. ಈ ವೇಳೆ ಮಹಿಳೆಯನ್ನ ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ. ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದಾನೆ.

ಮಹಿಳೆಗೆ ಗೊತ್ತಾಗದಂತೆ ಆಕೆಯ ಬಳಿ ತನ್ನ ವಿಕೃತಿ ತೋರಿದ್ದಾನೆ. ಕಾಮುಕನ ಕೈಯಿಂದ ತಪ್ಪಿಸಿಕೊಂಡ ಮಹಿಳೆ ರಕ್ಷಣೆಗಾಗಿ ಕಿರುಚಾಡಿದ್ದಾಳೆ. ಈ ವೇಳೆ ಕಾಮುಕ ಸ್ಥಳದಿಂದ ಎಸ್ಕೇಪ್​ ಆಗ್ಬಿಟ್ಟಿದ್ದಾನೆ.

ಆಗಸ್ಟ್ 02ರ ಬೆಳಗಿನ ಜಾವ ಐದು ಘಂಟೆಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿದ್ದಾರೆ. ಸಿಸಿಟಿವಿ ಡಿವಿಆರ್​ ಅನ್ನು ವಶಕ್ಕೆ ಪಡೆದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Ad
Ad
Nk Channel Final 21 09 2023