ಆನೇಕಲ್:‌ ಪುರಸಭೆ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ಪಟ್ಟಣದಲ್ಲಿ ನಡೆದಿದೆ.

ಆನೇಕಲ್‌ ಪಟ್ಟಣದ ಹೊಸೂರು ಮುಖ್ಯ ರಸ್ತೆಯಲ್ಲಿ ಪುರಸಭೆ ಸದಸ್ಯ ರವಿ ಅಲಿಯಾ ಸ್ಕ್ರ್ಯಾಪ್‌ ರವಿ ಎಂಬುವರನ್ನು ಇಂದು ರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆನೇಕಲ್‌ ಪುರಸಭೆಯ 22ನೇ ವಾರ್ಡ್‌ ಸದಸ್ಯರಾಗಿರುವ ರವಿ ಅವರ ಮೇಲೆ ವೈಷ್ಯಮ್ಯ ಇತ್ತು. ಇದೇ ಕಾರಣಕ್ಕಾಗಿ ಏಕಾಏಕಿ ದಾಳಿ ನಡೆಸಿ, ಮನಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.  ಪ್ರಕರಣ ದಾಖಲಿಸಿಕೊಂಡಿರುವ ಆನೇಕಲ್‌ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.