ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನರನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲೇ ರಾಮನಗರ ಪೊಲೀಸರು ಶಾಸಕ ಮುನಿರತ್ನರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಪರಿಶಿಷ್ಟ ಜಾತಿ ನಿಂದನೆ ಆರೋಪದಡಿ ವೇಲು ನಾಯ್ಕರ್ ದಾಖಲಿಸಿರುವ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜಾಮೀನು ಸಿಕ್ಕಿತ್ತು.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕರೂ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅತ್ಯಾಚಾರ ಆರೋಪ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Ad