ರಾಜಸ್ಥಾನ: ರಾಜಸ್ಥಾನದ ಸೀಕರ್‌ ಜಿಲ್ಲೆಯಲ್ಲಿ ವಿಷಕಾರಿ ಅನಿಲ ಸೇವಿಸಿ 22ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಸಿಕಾರ್ ಕೈಗಾರಿಕಾ ಪ್ರದೇಶದ ಸಮೀಪದ ಜನರಲ್ಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ.

16 ಮಕ್ಕಳು ಸೇರಿದಂತೆ 22ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಹಿಂದಿನ ಕಾರಣ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.