ಬಿಹಾರ: ವಿಕಾಸಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಮುಖ್ಯಸ್ಥ ಮುಖೇಶ್ ಸಹಾನಿ ಅವರ ತಂದೆಯನ್ನು ದುಷ್ಕರ್ಮಿಗಳು ಮನೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದರೆ.ಬಿಹಾರದ ದರ್ಭಾಂಗಾದಲ್ಲಿ ಈ ದುರ್ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಸೋಮವಾರ ರಾತ್ರಿ ಘನಶ್ಯಾಂಪುರ್ ಪ್ರದೇಶದಲ್ಲಿನ ಅವರ ವಸತಿ ಗೃಹದಲ್ಲಿ ಜೀತನ್ ಸಹಾನಿ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ನಡೆದಿದೆ. ಡಿಎಸ್ಪಿ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದೆ.

ಈ ಬಗ್ಗೆ ಕೇಂದ್ರ ಸಚಿವ ಮತ್ತು ಎಲ್‌ಜೆಪಿ (ಆರ್‌ವಿ) ಚಿರಾಗ್ ಪಾಸ್ವಾನ್ ಅವರು ಪ್ರತಿಕ್ರಿಯೆ ನೀಡಿದ್ದು ಮುಖೇಶ್ ಸಹಾನಿ ಅವರ ತಂದೇಹ ಹತ್ಯೆ ಖಂಡನೀಯ ಕೊಲೆ ಮಾಡಿದವರು ಯಾರೇ ಆಗಿದ್ದರು ಪೊಲೀಸರು ಅವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.