ಬೆಂಗಳೂರು : ನಗರದ ಕೋರಮಂಗಲದ ಪಿಜಿಗೆ ನುಗ್ಗಿ ಕೃತಿ ಕುಮಾರಿಯನ್ನು ಚಾಕುವಿನಿಂದ ಇರಿದು ಕೊಂದಿದ್ದ ಆರೋಪಿ ಅಭಿಷೇಕ್ ಕೊಲೆ ನಂತರ ತಪ್ಪಿಸಿಕೊಂಡಿದ್ದ ಇದೀಗ ಮಧ್ಯ ಪ್ರದೇಶದಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ.
ಮೊನ್ನೆಯೇ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು, ಅಲ್ಲಿನ ಭೋಪಾಲ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿ, ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆತಂದಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಫೂಟೇಜ್‌ಗಳು, ಪ್ರತ್ಯಕ್ಷದರ್ಶಿಗಳು ಹಾಗೂ ಆರೋಪಿಯ ಪ್ರೇಯಸಿಯ ಹೇಳಿಕೆಗಳ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ

