ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .
ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.
ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ.

