Bengaluru 23°C
Ad

ಬೆಂಗಳೂರಿನಲ್ಲಿ ಮಹಿಳೆಯ ಕೊಲೆ: ಮೃತದೇಹವನ್ನು ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿ

ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕನಗರದಲ್ಲಿ ನಡೆದಿದೆ.

ಬೆಂಗಳೂರು: ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕನಗರದಲ್ಲಿ ನಡೆದಿದೆ.

ಮಹಿಳೆಯನ್ನು ಹತ್ಯೆ ಮಾಡಿ ಮಾಂಸದ ಗುಡ್ಡೆ ಮಾಡಿ ಫ್ರಿಡ್ಜ್‌ನಲ್ಲಿ ಇಟ್ಟು ಮಗುವನ್ನು ಮನೆಯಲ್ಲೇ ಬಿಟ್ಟು ಆರೋಪಿ ಎಸ್ಕೇಪ್ ಆಗಿದ್ದಾನೆ. 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

2-3 ತಿಂಗಳಿನಿಂದ ಮನೆಯಲ್ಲಿ ಬಾಡಿಗೆಗಿದ್ದರು. ಇಂದು ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರೆದಿದೆ.

Ad
Ad
Nk Channel Final 21 09 2023