Bengaluru 29°C
Ad

ಆಸ್ತಿ ವಿಚಾರ: ಗ್ರಾಮ ಪಂಚಾಯತಿ ಸದಸ್ಯನಿಂದ ಯುವತಿ ಮೇಲೆ ಹಲ್ಲೆ

ಆಸ್ತಿ ವಿಚಾರವಾಗಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ನಡುರಸ್ತೆಯಲ್ಲೇ ಯುವತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಧಾರವಾಡ ತಾಲೂಕಿನ ಕನಕೂರ ಗ್ರಾಮದಲ್ಲಿ ಘಟನೆ ನಡೆದಿದೆ.

ಧಾರವಾಡ: ಆಸ್ತಿ ವಿಚಾರವಾಗಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ನಡುರಸ್ತೆಯಲ್ಲೇ ಯುವತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಧಾರವಾಡ ತಾಲೂಕಿನ ಕನಕೂರ ಗ್ರಾಮದಲ್ಲಿ ಘಟನೆ ನಡೆದಿದೆ.

ಮಾರುತಿ ಪವಾರ್ ಎಂಬ ಗ್ರಾಮ ಪಂಚಾಯತಿ ಸದಸ್ಯ ಯುವತಿ ಮೇಲೆ ಹಲ್ಲೆ ಮಾಡಿದವನು. ಹಲ್ಲೆ ಮಾಡುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧ ಪಟ್ಟಂತೆ ಮಾರುತಿ ತನ್ನ ಅಕ್ಕನ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ.

ಮಾರುತಿ ಜತೆಗೆ ಮತ್ತೊಬ್ಬ ಸಂಬಂಧಿ ಸಹೋದರ ರಾಮಚಂದ್ರ ಕೂಡ ಸಾಥ್‌ ನೀಡಿದ್ದಾನೆ. ಆಸ್ತಿ ವಿಚಾರವಾಗಿ ಯುವತಿ ಪ್ರಶ್ನೆ ಮಾಡಿದ್ದಕ್ಕೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧದಿಂದ ನಿಂದಿಸಿದ ಹಲ್ಲೆ ಮಾಡಿದ್ದಾರೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

Ad
Ad
Nk Channel Final 21 09 2023
Ad