Bengaluru 22°C
Ad

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಟ್ವಿಸ್ಟ್; ದರ್ಶನ್‌ಗೆ ಸಹಾಯ ಮಾಡಿದ್ದ ಮತ್ತಿಬ್ಬರು ಲಾಕ್‌

Arrest

ಚಿತ್ರದುರ್ಗ: ರೇಣುಕಾಸ್ವಾಮಿಯನ್ನು ಕ್ರೂರವಾಗಿ ಕೊಂದ ಕೇಸ್​ನಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ ಇನ್ನುಳಿದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸ್ಥಳ ಮಹಜರು ಸೇರಿದಂತೆ ಆರೋಪಿಗಳ ವಿಚಾರಣೆಯು ಸುಸೂತ್ರವಾಗಿ ನಡೆಯುತ್ತಿದೆ.

Ad
300x250 2

ಈ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು ಪೊಲೀಸರು ಕೆದಕಿದಷ್ಟು ಮಾಹಿತಿ ಸಂಗ್ರಹವಾಗುತ್ತಿದೆ. ಇದರ ಬೆನ್ನಲ್ಲೇ ಮತ್ತಿಬ್ಬರು ಆರೋಪಿಗಳನ್ನು ಚಿತ್ರದುರ್ಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳಾದ ಜಗ್ಗು, ಅನು ಎಂಬುವರು ಚಿತ್ರದುರ್ಗದ ಡಿವೈಎಸ್​​ಪಿ ಕಚೇರಿಗೆ ತಾವೇ ಬಂದು ಸೆರೆಂಡರ್ ಆಗಿದ್ದಾರೆ. ಇವರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವಿದೆ. ರೇಣುಕಾಸ್ವಾಮಿ ಕೊಲೆ ನಡೆದ ಮೇಲೆ ಆರೋಪಿಗಳಾದ ಜಗ್ಗು, ಅನು ತಲೆಮರೆಸಿಕೊಂಡಿದ್ದರು. ಹೀಗಾಗಿ ಪೊಲೀಸರು ಹುಡುಕಾಟದಲ್ಲಿ ಇರುವಾಗಲೇ ತಾವೇ ಪೊಲೀಸ್​ ಕಚೇರಿಗೆ ಬಂದು ಶರಣಾಗಿದ್ದಾರೆ.

Ad
Ad
Nk Channel Final 21 09 2023
Ad