ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಸೇರಿ 13 ಮಂದಿ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದ. ಇದನ್ನು ದರ್ಶನ್ ಸಹಿಸಿಲ್ಲ ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಅವರು ಕೊಲೆ ಮಾಡಿದರು ಎನ್ನುವ ಆರೋಪ ಎದುರಾಗಿದೆ. ದರ್ಶನ್ಗೆ ಸಹಾಯ ಮಾಡಿದ ಎಲ್ಲರೂ ಈಗ ಜೈಲು ಸೇರಿದ್ದಾರೆ.
ಕೊಲೆಯಾದ ರೇಣುಕ ಸ್ವಾಮಿ ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡೋಕೆ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದರೂ ಹೊಸ ಅಕೌಂಟ್ ಓಪನ್ ಮಾಡಿ ಅಶ್ಲೀಲವಾಗಿ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದರಂತೆ.
ಈ ವಿಚಾರವನ್ನು ಮನೆಗೆಲಸದವನಾದವನಿಗೆ ಪವಿತ್ರಾ ಗೌಡ ಹೇಳಿದ್ದರು. ‘ಯಾವುದೇ ಕಾರಣಕ್ಕೂ ದರ್ಶನ್ಗೆ ಹೇಳಬೇಡ. ಅವನು ಏನಾದ್ರು ಮಾಡಿಬಿಡ್ತಾನೆ’ ಎಂದು ಹೇಳಿದ್ದರು. ಆದರೆ, ಮನೆಗೆಲಸದವನಾದವನ ಬಾಯಲ್ಲಿ ಹೆಚ್ಚು ಹೊತ್ತು ಈ ಗುಟ್ಟು ನಿಲ್ಲಲಿಲ್ಲ. ಅವನು ದರ್ಶನ್ಗೆ ವಿಚಾರ ತಿಳಿಸಿದ್ದ. ಆಮೇಲೆ ದರ್ಶನ್ ಹಾಗೂ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದರು. ಆ ಬಳಿಕ ಹಲ್ಲೆ ನಡೆಸಿ, ಕೊಲೆ ಮಾಡಲಾಯಿತು ಎಂದು ವರದಿಯಾಗಿದೆ.

