Ad

ಪವಿತ್ರಾಗೆ ʼಗುಪ್ತಾಂಗʼದ ಫೋಟೋ ಕಳುಹಿಸಿ ನಾನೇನು ಕಡಿಮೆ ಬಾ ಎಂದಿದ್ದ ಸ್ವಾಮಿ !

Pavithra (1)

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಸೇರಿ 13 ಮಂದಿ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದ. ಇದನ್ನು ದರ್ಶನ್ ಸಹಿಸಿಲ್ಲ ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಅವರು ಕೊಲೆ ಮಾಡಿದರು ಎನ್ನುವ ಆರೋಪ ಎದುರಾಗಿದೆ. ದರ್ಶನ್​ಗೆ ಸಹಾಯ ಮಾಡಿದ ಎಲ್ಲರೂ ಈಗ ಜೈಲು ಸೇರಿದ್ದಾರೆ.

Ad
300x250 2

ಕೊಲೆಯಾದ ರೇಣುಕ ಸ್ವಾಮಿ ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡೋಕೆ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದರೂ ಹೊಸ ಅಕೌಂಟ್ ಓಪನ್ ಮಾಡಿ ಅಶ್ಲೀಲವಾಗಿ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದರಂತೆ.

ಈ ವಿಚಾರವನ್ನು ಮನೆಗೆಲಸದವನಾದವನಿಗೆ ಪವಿತ್ರಾ ಗೌಡ ಹೇಳಿದ್ದರು. ‘ಯಾವುದೇ ಕಾರಣಕ್ಕೂ ದರ್ಶನ್​ಗೆ ಹೇಳಬೇಡ. ಅವನು ಏನಾದ್ರು ಮಾಡಿಬಿಡ್ತಾನೆ’ ಎಂದು ಹೇಳಿದ್ದರು. ಆದರೆ, ಮನೆಗೆಲಸದವನಾದವನ ಬಾಯಲ್ಲಿ ಹೆಚ್ಚು ಹೊತ್ತು ಈ ಗುಟ್ಟು ನಿಲ್ಲಲಿಲ್ಲ. ಅವನು ದರ್ಶನ್​ಗೆ ವಿಚಾರ ತಿಳಿಸಿದ್ದ. ಆಮೇಲೆ ದರ್ಶನ್ ಹಾಗೂ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದರು. ಆ ಬಳಿಕ ಹಲ್ಲೆ ನಡೆಸಿ, ಕೊಲೆ ಮಾಡಲಾಯಿತು ಎಂದು ವರದಿಯಾಗಿದೆ.

Ad
Ad
Nk Channel Final 21 09 2023
Ad