ಹಾಸನ: ಡಿವೈಎಸ್‌ಪಿ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿ 2 ಬ್ಯಾಂಕ್ ಖಾತೆಯಿಂದ 15,98,761 ರೂ. ಖದೀಮರು ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದ ಸೈಬರ್ ಖದೀಮರು ಹಣ ಎಗರಿಸಿದ್ದಾರೆ. 2 ಬ್ಯಾಂಕ್ ಖಾತೆಗಳಿಂದ ಬರೋಬ್ಬರಿ 15,98,761 ಲಕ್ಷ ರೂ ಎಗರಿಸಿದ್ದಾರೆ. ಘಟನೆ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೇ.20 ರಂದು ಮಧ್ಯಾಹ್ನ 1.30ರ ಸಮಯದಲ್ಲಿ ಫೋನ್ಗೆ ಬಂದ ಮೆಸೇಜ್‌ಗಳ ಮೂಲಕ ಖದೀಮರ ಕೈಚಳಕ ಗಮನಕ್ಕೆ ಬಂದಿದೆ. ಡಿವೈಎಸ್‌ಪಿ ಅವರ ಬ್ಯಾಂಕ್ ಖಾತೆಗಳಿಂದ ಅಧಿಕಾರಿಯ ಗಮನಕ್ಕೆ ಬಾರದೆ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ.

