ಬದ್ಲಾಪುರ: ಖಾಸಗಿ ಶಾಲೆಯ ಮಕ್ಕಳಿಬ್ಬರ ಮೇಲೆ ಶಾಲಾ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಹೀನ ಕೃತ್ಯ ಖಂಡಿಸಿ ರೈಲು ನಿಲ್ದಾಣದಲ್ಲಿ ಭಾರೀ ಪ್ರತಿಭಟನೆ ನಡೆದಿರುವ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ.  ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾಕಾರರು ಹಳಿಗಳಿಗೆ ಇಳಿದು ಪ್ರತಿಭಟನೆ ನಡೆಸಿದ ಕಾರಣ ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ರೈಲು ಸಂಚಾರ ಸ್ಥಗಿತಗೊಳಿಸಲಾಯಿತು.

ಶಾಲೆಯ ವಾಶ್‌ರೂಮ್‌ಗೆಂದು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ 23 ವರ್ಷದ ಕಾಮಿ ಅತ್ಯಾಚಾರ ಎಸಗಿದ್ದಾನೆ. ಬೆಳಗ್ಗೆ ತರಗತಿಯ ವೇಳೆ ಬಾಲಕಿಯರು ವಾಶ್‌ರೂಮ್‌ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಆರೋಪಿ, ಅಕ್ಷಯ್ ಶಿಂಧೆಯನ್ನು ಆಗಸ್ಟ್ 1, 2024 ರಂದು ಗುತ್ತಿಗೆ ಆಧಾರದ ಮೇಲೆ ನೇಮಿಸಲಾಯಿತು. ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದಾಗ ಬಾಲಕಿಯರ ಶೌಚಾಲಯವನ್ನು ಸ್ವಚ್ಛಗೊಳಿಸುವ ಹೊಣೆಗಾರಿಕೆಯನ್ನು ಆತನಿಗೆ ನೀಡಲಾಗಿತ್ತು. ಶುಕ್ರವಾರ ರಾತ್ರಿ ಇಬ್ಬರು ಬಾಲಕಿಯರ ಪೋಷಕರು ದೂರು ದಾಖಲಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.