Bengaluru 23°C
Ad

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಹಾಡುಹಗಲೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿಡಿಗೇಡಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉತ್ತರಪ್ರದೇಶ ಮುಜಾಫರ್‌ನಗರದಲ್ಲಿ ಈ ಘಟನೆ ನಡೆದಿದೆ.

ಉತ್ತರಪ್ರದೇಶ: ಹಾಡುಹಗಲೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿಡಿಗೇಡಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉತ್ತರಪ್ರದೇಶ ಮುಜಾಫರ್‌ನಗರದಲ್ಲಿ ಈ ಘಟನೆ ನಡೆದಿದೆ.

ಈ ಘಟನೆಯ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನು ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆರೋಪಿಯ ಹಡೆಮುರಿ ಕಟ್ಟಿರುವ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.

ಆರೋಪಿಯನ್ನು ಸಲ್ಮಾನ್ ಎಂದು ಗುರುತಿಸಲಾಗಿದೆ.

ಈ ಕಾಮುಕ  ರಸ್ತೆಯಲ್ಲಿ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದ ಬಾಲಕಿಯ ಹಿಂಭಾಗವನ್ನು ಮುಟ್ಟಿ ಕಿರುಕುಳ ನೀಡಿ ಎಸ್ಕೇಪ್‌ ಆಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದೇ ವೇಳೆ ಸಂತ್ರಸ್ತ ಬಾಲಕಿ ತನ್ನ ಮನೆಯವರಿಗೆ ಘಟನೆಯ ಬಗ್ಗೆ ತಿಳಿಸಿದ್ದಾಳೆ. ಆ ಬಳಿಕ ಮನೆಯವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸರು ಆರೋಪಿ ಸಲ್ಮಾನ್‌ನನ್ನು ಅರೆಸ್ಟ್‌ ಮಾಡುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಎನ್‌ಕೌಂಟರ್‌ನಲ್ಲಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

Ad
Ad
Nk Channel Final 21 09 2023
Ad