ಮುಂಬೈ: ಶಾಲೆಯೊಂದರ ಕಾಮುಕ ಶಿಕ್ಷಕನೋರ್ವ ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸದ್ಯ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ಶಿಕ್ಷಕನನ್ನು 47 ವರ್ಷದ ಪ್ರಮೋದ್ ಸರ್ದಾರ್ ಎಂದು ಗುರುತಿಸಲಾಗಿದೆ/ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. 8 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಒಬ್ಬಾಕೆ ಮಕ್ಕಳ ಕಲ್ಯಾಣ ಕೇಂದ್ರದ ಟೋಲ್ ಫ್ರೀ ಸಹಾಯವಾಣಿಗೆ ಕರೆ ಮಾಡಿ ಘಟನೆಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಳು. ಅಧಿಕಾರಿಗಳು ಶಾಲೆಗೆ ಹೋಗಿ ತನಿಖೆಯನ್ನು ನಡೆಸಿ ಶಿಕ್ಷಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಪ್ರಕರಣದ ವಿವರಗಳ ಪ್ರಕಾರ, ಶಿಕ್ಷಕ ಕಳೆದ ನಾಲ್ಕು ತಿಂಗಳಿನಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸುತ್ತಿದ್ದ. ವಿಡಿಯೊ ತೋರಿಸುತ್ತಾ ಅನುಚಿತವಾಗಿ ಸ್ಪರ್ಶಿಸುತ್ತಿದ್ದ. ಆರು ವಿದ್ಯಾರ್ಥಿನಿಯರು ದೂರು ನೀಡಿದ್ದರು. ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಮಂಗಳವಾರ ಬೆಳಿಗ್ಗೆ ಶಾಲೆಗೆ ಭೇಟಿ ನೀಡಿ ಕೆಲವು ಬಾಲಕಿಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

