ಮೈಸೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಪತ್ನಿಗೆ ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಜಟ್ಟಿಹುಂಡಿ ಗ್ರಾಮದಲ್ಲಿ ನಡೆದಿದೆ.

ಸವಿತ (35 ವರ್ಷ) ಮೃತ ಮಹಿಳೆ. ದೇವರಾಜು (45 ವರ್ಷ ) ಹತ್ಯೆ ಮಾಡಿರುವ ಪಾಪಿ ಪತಿ. ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಮೈಸೂರು ದಕ್ಷಿಣವಲಯ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.