ನೆಲಮಂಗಲ: ತಂಗಿಯ ಬರ್ತ್ ಡೇ  ಪಾರ್ಟಿಗೆ ಕರೆದುಕೊಂಡು ಹೋಗದ್ದಕ್ಕೆ ಮನನೊಂದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಶ್ಯಾಮಭಟ್ಟರಪಾಳ್ಯ ಎಂಬಲ್ಲಿ ನಡೆದಿದೆ. 22 ವರ್ಷದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಕಳೆದ 6 ತಿಂಗಳ ಹಿಂದೆ ಈಕೆ ಲಕ್ಷ್ಮಿನಾರಾಯಣ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು ಎನ್ನಲಾಗಿದೆ.

ಕೇವಲ ಬರ್ತ್ ಡೇ ಪಾರ್ಟಿ ವಿಚಾರಕ್ಕೆ ಮನನೊಂದು ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.