ಚೀನಾ: ವುಕ್ಸಿ ನಗರದ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿದ ಪರಿಣಾಮ 8 ಜನ ಸಾವನ್ನಪ್ಪಿದ್ದು, 17 ಜನ ಗಾಯಗೊಂಡಿರುವ ಘಟನೆ ನಡೆದಿದೆ.
Ad
ಚೀನಾದ ವುಕ್ಸಿ ಸಿಟಿಯಲ್ಲಿ 21 ವರ್ಷದ ವಿದ್ಯಾರ್ಥಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದು, ಸದ್ಯ ಆರೋಪಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ವರದಿಯ ಪ್ರಕಾರ, ವಿದ್ಯಾರ್ಥಿ ನಡೆಸಿದ ಹಲ್ಲೆಯಿಂದ 17 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದಾಳಿಯ ಹಿಂದಿನ ಉದ್ದೇಶವನ್ನು ಬಹಿರಂಗಪಡಿಸಿಲ್ಲ.
Ad
Ad