ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರೌಡಿಶೀಟರ್ ಗುರುರಾಜ್ ಆಚಾರಿ ಎಂಬಾತನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಕಟ್ಲ ನಿವಾಸಿಗಳಾದ ಸುಶಾಂತ್ ಯಾನೆ ಕಡವಿ, ಕೆ.ವಿ. ಅಲೆಕ್ಸ್, ಸುರತ್ಕಲ್ ಇಂದಿರಾ ಕಟ್ಟೆ ನಿವಾಸಿ ನಿತಿನ್ ಮತ್ತು ಕುಳಾಯಿ ಹೊನ್ನಕಟ್ಟೆ ನಿವಾಸಿ ಅರುಣ್ ಶೆಟ್ಟಿ ಎಂಬವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದರು.
ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಮತ್ತು ಅಶೋಕ್ ಎಂಬವರು ತಲೆ ಮರೆಸಿಕೊಂಡಿದ್ದರು. ಈಗ ಗುರುರಾಜ್‌ನ್ನು ಬಂಧಿಸಿರುವ ಪೊಲೀಸರು ತಲೆ ಮರೆಸಿಕೊಂಡಿರುವ ಅಶೋಕ್ ಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

