ಚೆನ್ನೈ: ದುಷ್ಕರ್ಮಿಗಳ ಗ್ಯಾಂಗ್‌ವೊಂದು ತಮಿಳುನಾಡಿನ ಬಿಎಸ್‌ಪಿ ಅಧ್ಯಕ್ಷ ಆರ್ಮ್ಸ್‌ಸ್ಟ್ರಾಂಗ್ ಅವರನ್ನು ಹತ್ಯೆಗೈದಿರುವ ಘಟನೆ ನಡೆದಿದೆ.
ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಚೆನ್ನೈ ಪೆರಂಬೂರಿನಲ್ಲಿರುವ ಆರ್ಮ್ಸ್‌ಸ್ಟ್ರಾಂಗ್ ಅವರ ನಿವಾಸದ ಬಳಿಯೇ ಘಟನೆ ನಡೆದಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
6 ಮಂದಿ ದುಷ್ಕರ್ಮಿಗಳ ಗ್ಯಾಂಗ್‌ನಿಂದ ಹತ್ಯೆ ನಡೆದಿದೆ. ಚೆನ್ನೈನ ಸೆಂಬಿಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

